ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ
Monday, September 20, 2021
2021ನೇ ಸಾಲಿನ ಸಿಇಟಿ/ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವನ್ನು ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿ ಹಮ್ಮಿಕೊಂಡಿದೆ.
ಸೆ. 22ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿಯ ಅಲ್ ರಹಬಾ ಪ್ಲಾಝಾದ ಎರಡನೇ ಮಹಡಿಯಲ್ಲಿರುವ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ.
ಸಿಇಟಿ/ನೀಟ್ ಆನ್'ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು, ದಾಖಲೆಗಳ ಪರಿಶೀಲನೆ, ಲಭ್ಯವಿರುವ ವಿವಿಧ ವಿಭಾಗದ ಸೀಟುಗಳು, ಸರಕಾರದ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಯೋಜನೆಗಳು ಹಾಗೂ ಕರಿಯರ್ ಆಯ್ಕೆಯ ಅಗತ್ಯತೆ ಮತ್ತು ವಿಧಾನಗಳ ಕುರಿತಂತೆ ಶಿಬಿರದಲ್ಲಿ ಸಮಗ್ರ ಮಾರ್ಗದರ್ಶನ ನೀಡಲಾಗುವುದು.
ನೋಂದಾವಣೆ ಕಡ್ಡಾಯವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ದೂ. ಸಂ. 0824 4261320, 9845054191ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.