ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಆಯ್ಕೆಯಾಗಿರುವ ಜಿಲ್ಲಾ ಪದಾಧಿಕಾರಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ಅವರ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ದೀಪಿಕಾ ರೆಡ್ಡಿ ಮತ್ತು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿಯಾದ ಮನ್ನಾರ್ ಮನ್ನನ್ ಅವರು ನೂತನ ಪದಾಧಿಕಾರಿಗಳಿಗೆ "ಆದೇಶ ಪತ್ರ" ವಿತರಿಸಿದರು.
ಜಿಲ್ಲಾ ಉಪಾಧ್ಯಕ್ಷರಾಗಿ ಅಭಿಷೇಕ್ ಬೆಳ್ಳಿಪ್ಪಾಡಿ, ಸೌಮ್ಯಲತಾ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ರಮಾನಂದ ಪೂಜಾರಿ, ನವಾಲ್ ಬಿ.ಕೆ, ರಂಜಿತ್ ಬಂಗೇರ, ನವೀದ್ ಅಖ್ತರ್, ಶೈಲಜಾ ಅಮರನಾಥ್, ಮೋಹಿತ್ ಹರ್ಲಡ್ಕ, ರೋಷನ್ ರೈ, ತೃಪ್ತಿ ಕೋಟ್ಯಾನ್, ಫೈಝಲ್ ಕಡಬ, ವೈಭವ್ ಶೆಟ್ಟಿ, ಮೊಹಮ್ಮದ್ ಇರ್ಷಾದ್, ಜಿನ್ನ ಜೆನಿಟ ಲೋಬೋ, ಪ್ರಸಾದ್ ಗಾಣಿಗ, ಹಸನ್ ಫಲ್ನೀರ್, ಉಮೈ ಬಾನು ಮತ್ತು ಕವಿತ ಅವರು ಆದೇಶ ಪತ್ರವನ್ನು ಸ್ವೀಕರಿಸಿದರು.
ಸಭೆಯಲ್ಲಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಗಿರೀಶ್ ಆಳ್ವ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೊ, ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ನವಾಝ್ ನರಿಂಗಾನ, ಮಂಗಳೂರು ನಗರ ಬ್ಲಾಕ್ ಅಧ್ಯಕ್ಷರಾದ ರಾಕೇಶ್ ದೇವಾಡಿಗ ಅವರು ಉಪಸ್ಥಿತರಿದ್ದರು.