ಕೃತಿ ಶೆಟ್ಟಿಯನ್ನು ಮಗಳೆಂದು ಕಲ್ಪಿಸಿಕೊಂಡ ಮೇಲೆ ಅಂಥ ಕೆಲಸ ಮಾಡಲು ಸಾಧ್ಯವಿಲ್ಲ : ವಿಜಯ್ ಸೇತುಪತಿ..
Monday, September 6, 2021
ಚೆನ್ನೈ: ತೆಲುಗಿನ ಉಪ್ಪೇನಾ ಚಿತ್ರದ ಮೂಲಕ ಸೇತುಪತಿ ಟಾಲಿವುಡ್ಗೆ ಪದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಸೇತುಪತಿ ನಾಯಕಿ ಕೃತಿ ಶೆಟ್ಟಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ.
ಕೃತಿಯ ನಟನೆಯನ್ನು ನೋಡಿ ಸೇತುಪತಿ ಮನಸಾರೆ ಹೊಗಳಿದ್ದರು. ಆದರೆ ಇದೀಗ ಅವರೊಂದಿಗೆ ತಮಿಳು ಚಿತ್ರ ಮಾಡುವುದನ್ನು ಸೇತುಪತಿ ನಿರಾಕರಿಸಿದ್ದಾರೆ. ಅದಕ್ಕೆ ಕಾರಣವೇನೆಂದರೆ ಸೇತುಪತಿ ತಮಿಳು ಚಿತ್ರವೊಂದಕ್ಕೆ ಸಹಿ ಹಾಕಿದ್ದರು. ಆ ಚಿತ್ರದಲ್ಲಿ ಅವರಿಗೆ ನಾಯಕಿಯಾಗಿ ಕೃತಿ ಶೆಟ್ಟಿ ಹೆಸರು ಕೇಳಿಬಂದಿದ್ದಕ್ಕೆ ಆ ಪ್ರಸ್ತಾವನೆಯನ್ನು ಸೇತುಪತಿ ಆಗಲ್ಲ ಎಂದಿದ್ದಾರೆ.
ನಾನು ಉಪ್ಪೇನಾ ಚಿತ್ರದಲ್ಲಿ ಕೃತಿಗೆ ತಂದೆಯಾಗಿ ಅಭಿನಯಿಸಿದ್ದೇನೆಂಬುದು ಚಿತ್ರತಂಡಕ್ಕೆ ಗೊತ್ತಿರಲಿಲ್ಲ. ನನ್ನ ಮಗಳೆಂದು ಭಾವಿಸಿದ ಮೇಲೆ ಅವಳೊಂದಿಗೆ ನಾನ್ಹೇಗೆ ರೊಮ್ಯಾನ್ಸ್ ಮಾಡಲು ಸಾಧ್ಯ ಎಂದಿದ್ದಾರೆ. ನನ್ನ ಮಗನಿಗೆ ಸುಮಾರು 15 ವರ್ಷ ಕೃತಿಗಿಂತ ಸ್ವಲ ಚಿಕ್ಕವನು. ಕೃತಿಯನ್ನು ಕೂಡ ನಾನು ಮಗಳಂತೆ ಭಾವಿಸುತ್ತೇನೆ. ಆದ್ರೆ ತೆರೆಯ ಮೇಲೆ ನಾನು ಹೇಗೆ ಅವಳೊಂದಿಗೆ ರೊಮ್ಯಾನ್ಸ್ ಮಾಡಲು ಸಾಧ್ಯ. ಹೀಗಾಗಿ ಚಿತ್ರದ ನಾಯಕಿಯಾಗಿ ಅವಳ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದೇನೆಂದು ಹೇಳಿದ್ದಾರೆ.