ಕೇಂದ್ರ ಆಯುಷ್ ಸಚಿವರಿಂದ ಆಯುಷ್ ಆಸ್ಪತ್ರೆ ಉದ್ಘಾಟನೆ
Saturday, September 25, 2021
ಮಂಗಳೂರು : ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿ
ಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು.
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು.
ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಮೆಯರ್ ಪ್ರೇಮಾನಂದ ಶೆಟ್ಟಿ ವಿವಿಧ ನಿಗಮಗಳ ಅಧ್ಯಕ್ಷರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ರವೀಂದ್ರ ಶೆಟ್ಟಿ,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಡಿಎಚ್ಒ ಡಾ. ಕಿಶೋರ್, ಜಿಲ್ಲಾ ಆಯುಷ್ ಅಧಿಕಾರಿ ಮಹಮದ್ ಇಕ್ಬಾಲ್, ಮೆಡಿಕಲ್ ಅಧಿಕಾರಿಗಳು,
ಜನಪ್ರತಿನಿಧಿಗಳು, ಗಣ್ಯರು ಹಾಜರಿದ್ದರು.