
ಮಂಗಳೂರಿನ ಕುಮಾರಿ ಬಿಂದಿಯಾ ಶೆಟ್ಟಿ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ
Friday, September 17, 2021
ಸುರತ್ಕಲ್ : ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಸುರತ್ಕಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ಈಕೆ ಎಸ್ ಎಸ್ ಎಲ್ ಸಿಯಲ್ಲಿ ಹಾಗೂ ಪಿಯುಸಿಯಲ್ಲಿ ರಾಜ್ಯದಲ್ಲೇ ಐದನೇ ಸ್ಥಾನ ಪಡೆದಿದ್ದರು.
ಸದ್ಯ ಸಿಎ ವ್ಯಾಸಂಗವನ್ನೂ ಮಾಡುತ್ತಿರುವ ಬಿಂದಿಯಾ ಶೆಟ್ಟಿ ಅನೇಕ ಸಂಘಸಂಸ್ಥೆಗಳಿಂದಲೂ ಪ್ರಶಸ್ತಿ ಗೌರವಗಳನ್ನು ಪಡೆದಿದ್ದರು.
ಈಕೆ 2019 ರಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.