ಸಂಪದ (೨೩)ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ. ಬೆಂಗಳೂರಿನ ಮಹಾಲಕ್ಷ್ಮೀ ಬಡಾವಣೆಯ ಮನೆಯೊಂದರ ಸ್ನಾನದ ಕೋಣೆಯಲ್ಲಿ ಈ ಅವಘಡ ಸಂಭವಿಸಿದೆ.ಸಂಪದ ಸ್ನಾನಕ್ಕೆಂದು ಹೋಗಿದ್ದಾಗ ಎರಡು ಗಂಟೆ ಕಳೆದರೂ ಆಕೆ ಸ್ನಾನದ ಕೋಣೆಯಿಂದ ಹೊರಬರದಿದ್ದಾಗ ಮನೆಯವರು ಬಾತ್ರೂಮ್ ಬಾಗಿಲು ಮುರಿದು ಒಳಗೆ ನೋಡಿದ್ದಾರೆ. ಸ್ನಾನ ಮಾಡುತ್ತಿದ್ದ ಸಂಪದ ಕುಸಿದು ಬಿದ್ದಿದ್ದಳು. ಎಚ್ಚರ ತಪ್ಪಿ ಕುಸಿದು ಬಿದ್ದಿದ್ದ ಸಂಪದಳನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆಕೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಳು. ಸ್ನಾನದ ಸಂದರ್ಭ ಗೀಸರ್ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆ ಆಗಿದ್ದು, ಅದರಿಂದಾಗಿ ಆಕೆ ಉಸಿರುಗಟ್ಟಿ ಸಾವಿಗೀಡಾಗಿದ್ದಾಳೆ ಎಂಬುದು ವೈದ್ಯಕೀಯ ಪರೀಕ್ಷೆ ವೇಳೆ ತಿಳಿದುಬಂದಿದೆ.
ಮಹಾಲಕ್ಷ್ಮೀ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.