-->

ಬಿ ಸಿ ರೋಡ್ ನಲ್ಲಿ  ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ ಎ.ಟಿ.ಎಂ.ಉದ್ಘಾಟನೆ

ಬಿ ಸಿ ರೋಡ್ ನಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ ಎ.ಟಿ.ಎಂ.ಉದ್ಘಾಟನೆ


ಮಂಗಳೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬಿ.ಸಿ.ರೋಡು ಶಾಖಾ ಕಟ್ಟಡದ ನೆಲ ಅಂತಸ್ತಿನಲ್ಲಿ ಅನುಷ್ಠಾನಗೊಳಿಸಿದ ಬ್ಯಾಂಕಿನ ನೂತನ ಎಟಿಎಂ ನ್ನು  ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್  ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರ ವಿಶೇಷ ಮುತುವರ್ಜಿಯಿಂದ ಅನುಷ್ಠಾನಗೊಂಡ ಈ Atm  ಸರ್ವರ ಆರ್ಥಿಕ ವ್ಯವಹಾರಗಳಿಗೆ ನೆರವಾಗಲಿದೆ. ಬ್ಯಾಂಕಿನ ಗ್ರಾಹಕರ ಪ್ರೋತ್ಸಾಹದ ಪರಿಣಾಮದಿಂದ ಬ್ಯಾಂಕ್ ಈ ಮಟ್ಟಕ್ಕೆ ಪ್ರಗತಿ ಹೊಂದಿದೆ ಎಂದರು.

 
 

ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಮುಖ್ಯಅತಿಥಿಯಾಗಿ ಪಾಲ್ಗೊಂಡಿದ್ದರು. ಬ್ಯಾಂಕಿನ ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್, ಶಶಿಕುಮಾರ್ ರೈ ಬಿ, ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ, ಜಿಎಂ ಗೋಪಿನಾಥ್ ಭಟ್, ಭೂ ಅಭಿವೃದ್ಧಿ ಬ್ಯಾಂಕ್ ರಾಜ್ಯ ನಿರ್ದೇಶಕ ರಾಜಶೇಖರ ಜೈನ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಸಹಕಾರಿ ಇಲಾಖೆಯ ಗೋಪಾಲ ಗೌಡ, ಬಿ.ಸಿ.ರೋಡು ಶಾಖಾ ವ್ಯವಸ್ಥಾಪಕಿ ಸೌಮ್ಯ, ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಸಿಇಒ ಪಾಲ್ಗೊಂಡಿದ್ದರು.


 
ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭೇಟಿ ನೀಡಿದರು. ಅಮ್ಟಾಡಿ ಸಿಎ ಬ್ಯಾಂಕ್ ಸಿಬಂದಿ ದಿನೇಶ್ ಅಮೀನ್ ಕಾರ್ಯಕ್ರಮ ನಿರ್ವಹಿಸಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99