ಬಾಲಕಿಯನ್ನು ಗರ್ಭಿಣಿಯನ್ನಾಗಿಸಿ ವಿದೇಶಕ್ಕೆ ಪರಾರಿಯಾದ ಆರೋಪಿ: ಹೆರಿಗೆಯ ಬಳಿಕ ಪ್ರಕರಣ ಬೆಳಕಿಗೆ
Tuesday, September 7, 2021
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವ ಆರೋಪಿಯೋರ್ವನು ಆಕೆ ಗರ್ಭಿಣಿಯಾಗುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿದ್ದು, ಇದೀಗ ಆಕೆಯ ಹರಿಗೆಯ ಬಳಿಕ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ.
ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿದ್ದ ಸಂತ್ರಸ್ತ ಬಾಲಕಿಗೆ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂ ನಲ್ಲಿ ಆರೋಪಿ ಮಸೂದ್ ಪರಿಚಯವಾಗಿದ್ದ. ಬಳಿಕ ಆಕೆಯೊಂದಿಗೆ ಸಲಿಗೆ ಬೆಳೆಸಿಕೊಂಡ ಮಸೂದ್ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬಂದು ಅತ್ಯಾಚಾರ ಬಾಲಕಿಯ ಎಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು. ವಿಷಯ ತಿಳಿದ ಬಳಿಕ ಆತ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.
ಸಂತ್ರಸ್ತ ಬಾಲಕಿ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ತಲೆ ಮರೆಸಿಕೊಂಡಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆತನಿಗಾಗಿ ಶೋಧ ಮುಂದುವರಿದಿದೆ. ಬಂಟ್ವಾಳ ಪೊಲೀಸ್ ಇನ್ ಸ್ಪೆಕ್ಟರ್ ಟಿ.ಡಿ.ನಾಗರಾಜ್ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.