ಮಂಗಳೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ
Monday, September 27, 2021
ಮಂಗಳೂರು :- ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಸೆ.27ರ ಸೋಮವಾರ ನಗರದ ಓಷಿಯನ್ ಪಲ್೯ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸಿದರು.
ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್,ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ನಗರಾಭಿವೃದ್ದಿ ಪ್ರಾಧಿಕಾದ ಅಧ್ಯಕ್ಷ ರವಿಶಂಕರ್ ಮಿಜಾರು, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗಡೆ ಇದ್ದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಸ್ವಾಗತಿಸಿದರು.