ವಿವಿ ಕಾಲೇಜಿನಲ್ಲಿ ಕೊವಿಶೀಲ್ಡ್ ಲಸಿಕಾ ಅಭಿಯಾನ
Friday, September 17, 2021
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ʼಕೊವಿಡ್ ಲಸಿಕಾ ಮಹಾಮೇಳʼದ ಭಾಗವಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಯುವ ರೆಡ್ಕ್ರಾಸ್ ವತಿಯಿಂದ ಶುಕ್ರವಾರ ಉಚಿತ ಕೊವಿಶೀಲ್ಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ಸಾರ್ವಜನಿಕರು ಸೇರಿದಂತೆ ಸುಮಾರು 295 ಮಂದಿ ಅಭಿಯಾನದ ಪ್ರಯೋಜನ ಪಡೆದುಕೊಂಡರು. ಬಂದರು ಆರೋಗ್ಯ ಕೇಂದ್ರದ ಸಿಬ್ಬಂದಿ, ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ, ಕಾಲೇಜಿನ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರಸ್ವಾಮಿ ಎಂ, ವಿದ್ಯಾರ್ಥಿ ಸ್ವಯಂಸೇವಕರು ಹಾಜರಿದ್ದರು.