-->

ಕಡಿಮೆ ವೆಚ್ಚದಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಸರಕಾರದಿಂದ ಕ್ರಮ: ವೇದವ್ಯಾಸ ಕಾಮತ್

ಕಡಿಮೆ ವೆಚ್ಚದಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಸರಕಾರದಿಂದ ಕ್ರಮ: ವೇದವ್ಯಾಸ ಕಾಮತ್

ಮಂಗಳೂರು :- ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಿರುವ ಸರಕಾರ ಕಡಿಮೆ ವೆಚ್ಚದಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಅಗತ್ಯ ಕ್ರಮಕೈಗೊಂಡಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಹೇಳಿದರು.


ಅವರು  ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ತರಗತಿಗಳ ಆರಂಭದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಮಾತನಾಡಿದರು.

ಸರಕಾರಿ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಣ ನೀಡಲು ಶಕ್ತಿನಗರದ ಭಾಗದಲ್ಲಿ ಪದವಿ ಪೂರ್ವ ಕಾಲೇಜನ್ನು ಆರಂಭಿಸಲಾಗಿದೆ. ಈ ಭಾಗದಲ್ಲಿ ಬಹಳಷ್ಟು ವರ್ಷಗಳಿಂದ ಪದವಿ ಪೂರ್ವ ಶಿಕ್ಷಣ ಕಾಲೇಜು ಆರಂಭಕ್ಕೆ ಬೇಡಿಕೆಯಿತ್ತು. ಅದಕ್ಕೆ ಸಹಕರಿಸಿದ ಹಿಂದಿನ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಅವರಿಗೆ ವಿಶೇಷ ಅಭಿನಂದನೆಗಳು ಸಲ್ಲಬೇಕು ಎಂದ ಶಾಸಕರು, ಕಾಲೇಜಿನಲ್ಲಿ ಕಲೆ ಹಾಗೂ ವಾಣಿಜ್ಯ ವಿಷಯಗಳನ್ನು ಬೋಧಿಸಲಾಗುತ್ತಿದೆ, ಮುಂದಿನ ವರ್ಷದಿಂದ ವಿಜ್ಞಾನ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದರು.

 ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮಂಜೂರಾಗಿದ್ದ 21 ಕೋಟಿ ರೂ.ಗಳಲ್ಲಿ 5 ಕೋಟಿ ರೂ.ಗಳನ್ನು ಮಂಗಳೂರಿಗೆ ಮಂಜೂರು ಮಾಡಿಸಿಕೊಳ್ಳಲಾಗಿದೆ, ಹಂಪನಕಟ್ಟೆ ಬಳಿಯ ಬೋಕಪಟ್ನದಲ್ಲಿ ನಿರ್ಮಿಸಲಾಗುತ್ತಿರುವ ಪದವಿ ಪೂರ್ವ ಕಾಲೇಜಿಗೆ 4.82 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ, ಅದರಂತೆ ನಾಲ್ಯ ಪದವು ಸರಕಾರಿ ಕಾಲೇಜಿನ ಹೆಸರಿನಲ್ಲಿ 50 ಸೆಂಟ್ಸ್ ಭೂಮಿ ಲಭ್ಯವಾದಲ್ಲೀ ಈ ಕಾಲೇಜಿನ ಕಟ್ಟಡ ನಿರ್ಮಾಣಕ್ಕೂ ಸರಕಾರದಿಂದ 4.82 ಕೋಟಿ ರೂ.ಗಳ ಅನುದಾನವನ್ನು ಮುಂಬರುವ ದಿನಗಳಲ್ಲಿ ಮಂಜೂರು ಮಾಡಿಸಲಾಗುವುದು, ಶಿಕ್ಷಣ ಸಚಿವರು ಇದೇ 28ರ ನಂತರ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ಆ ಸಂದರ್ಭದಲ್ಲಿ ಭೂಮಿ ಪೂಜೆಯನ್ನು ಸಹ ನೆರವೇರಿಸಲಾಗುವುದು ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಈ ಕಾಲೇಜಿಗೆ ಮತ್ತಷ್ಟು ಹೆಚ್ಚಿನ ವಿದ್ಯಾರ್ಥಿಗಳು ದಾಖಲಾಗುವ ವಿಶ್ವಾಸ ವ್ಯಕ್ತಪಡಿಸಿದ ಶಾಸಕರು, ಸರಕಾರ ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವಂತೆ ಕರೆ ನೀಡಿದರು.

 ಮಂಗಳೂರು ಮಹಾನಗರ ಪಾಲಿಕೆಯ ಸ್ಥಳೀಯ ಸದಸ್ಯರಾದ ವನಿತಾ ಪ್ರಸಾದ್, ಶಕೀಲಾ ಖಾವಾ, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕ ಜಯಣ್ಣ, ನೆಲ್ಯಪದವು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯನಂದ ಸುವರ್ಣ, ಪ್ರೌಢಶಾಲೆಯ ಮುಖ್ಯೋಪಧ್ಯಾಯ ವಿಜಯ ಕುಮಾರಿ, ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯ ಬಿ.ಎಸ್. ರಾವ್, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯ ಪುರುಷೋತ್ತಮ ಭಟ್, ಪದವ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99