
ಮಂಗಳೂರಿನಲ್ಲಿ ಸರಳವಾಗಿ ವಿಶ್ವಕರ್ಮ ಜಯಂತಿ
ಮಂಗಳೂರು : ಕೋವಿಡ್ ಸೋಂಕು ಹಿನ್ನಲೆಯಲ್ಲಿ ಈ ಬಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ. 17ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ (ಪ್ರಭಾರ) ಮಾಣಿಕ್ಯ. ಎನ್. ಅವರು ಗಣ್ಯರೊಂದಿಗೆ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪುಪ್ರ್ಪಾಪಣೆ ಮಾಡಿ ಗೌರವ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ರಥಬೀದಿಯ ಕಾಳಿಕಾಂಬ ವಿನಾಯಕ ದೇವಸ್ಥಾನದ 2ನೇ ಮೊಕ್ತೆಸರು ಬೆಳುವಾಯಿ ಸುಂದರ್ ಆಚಾರ್ಯ, ರಥಬೀದಿಯ ಕಾಳಿಕಾಂಬ ವಿನಾಯಕ ದೇವಸ್ಥಾನದ ಸದಸ್ಯರುಗಳಾದ ಜಯಕರ ಆಚಾರ್ಯ, ಕೆ.ಕೆ ವಿಠಲ ಆಚಾರ್ಯ, ದಾಮೋದರ ಆಚಾರ್ಯ, ಸುಜೀರ್ ವಿನೋದ್, ದಿವಾಕರ ಆಚಾರ್ಯ, ರಮೇಶ್ ಆಚಾರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಹಾಗೂ ಇತರರು ಉಪಸ್ಥಿತರಿದ್ದರು