-->

ದಿಲ್ಲಿ ಸಾರಿಗೆ ಬಸ್‌ನಲ್ಲಿ ಇನ್ನು ಮಹಿಳಾ ಚಾಲಕರು: ಶೇ 33ರಷ್ಟು ಮಹಿಳಾ ಮೀಸಲಾತಿಗೆ ನಿರ್ಧಾರ

ದಿಲ್ಲಿ ಸಾರಿಗೆ ಬಸ್‌ನಲ್ಲಿ ಇನ್ನು ಮಹಿಳಾ ಚಾಲಕರು: ಶೇ 33ರಷ್ಟು ಮಹಿಳಾ ಮೀಸಲಾತಿಗೆ ನಿರ್ಧಾರ

ನವದೆಹಲಿ: ದೆಹಲಿಯನ್ನು ಇ -ಸಾರಿಗೆ ಮೂಲಕ ಹಸಿರು ರಾಜಧಾನಿಯನ್ನಾಗಿ ಮಾಡಲುದ್ದೇಶಿಸಿದ್ದು, ಇ ಸಾರಿಗೆ ಬಸ್‌ನಲ್ಲಿ ಚಾಲಕ ಹುದ್ದೆಗೆ ಶೇ. 33ರಷ್ಟು ಮಹಿಳಾ ಮೀಸಲಾತಿಯನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ತಿಳಿಸಿದ್ದಾರೆ.
ಅವರು ಸಂಡೇ ಸ್ಟ್ಯಾಂಡರ್ಡ್ ಗೆ ನೀಡಿದ ಸಂದರ್ಶನದಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ.

ದಿಲ್ಲಿಯಲ್ಲಿ ವಾಯುಮಾಲಿನ್ಯದ ಮಟ್ಟ ಕೂಡಾ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಎಲ್ಲಾ ಸಾರಿಗೆ ಬಸ್‌ಗಳನ್ನು ಎಲೆಕ್ಟ್ರಿಕ್ ಬಸ್‌ಗಳಾಗಿ ಪರಿವರ್ತಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಮೊದಲ ಹಂತದಲ್ಲಿ ಇ-ಆಟೋ ಪರ್ಮಿಟ್ ವ್ಯವಸ್ಥೆಯ ಮೂಲಕ ಮಹಿಳೆಯರಿಗೆ ಶೇ. 33ರಷ್ಟು ಚಾಲಕ ಹುದ್ದೆಯಲ್ಲಿ ಮೀಸಲಾತಿ ನೀಡಲಾಗುತ್ತಿದ್ದು, ಮುಂದಿನ ಹಂತದಲ್ಲಿ ಸಂಪೂರ್ಣವಾಗಿ ಚಾಲಕ ಹುದ್ದೆಯನ್ನು ಮಹಿಳೆಯರಿಗೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99