ಅಕ್ಟೋಬರ್‌ನಲ್ಲಿ ಬರಲಿದೆ ಮಕ್ಕಳಿಗೂ ಕೊರೋನಾ ಲಸಿಕೆ
Friday, October 1, 2021
ಬೆಂಗಳೂರು: ಶಾಲಾ ಕಾಲೇಜುಗಳು ಪ್ರಾರಂಭಗೊಂಡಿದ್ದು, ಮಕ್ಕಳಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ 18 ವರ್ಷದ ಕೆಳಗಿನ ಮಕ್ಕಳಿಗೂ ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ದೊರೆಯಲಿದೆ.
ಮಕ್ಕಳ ವ್ಯಾಕ್ಸಿನ್ ಈಗಾಗಲೇ ತಯಾರಾಗಿದ್ದು, ಇದೇ ತಿಂಗಳಲ್ಲೇ ಲಸಿಕೆಗಳನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಮಕ್ಕಳಿಗೆ ಬೇಕಾಗಿರುವ ಕೋರೋನಾ ಲಸಿಕೆಯ ಪ್ರಯೋಗಗಳು ಬಹುಪಾಲು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಇದರ ದರ ನಿಗದಿಯಾದ ಬಳಿಕ ಈ ಬಗ್ಗೆ ಅಂತಿಮ ತೀರ್ಮಾನವಾಗಲಿದೆ ಎಂದವರು ತಿಳಿಸಿದ್ದಾರೆ.
ಸದ್ಯ ಸರಕಾರದ ಮಾರ್ಗ ಸೂಚಿಯನ್ವಯ ಶಾಲೆಗಳು ಪ್ರಾರಂಭಗೊಂಡಿದ್ದು, ಮಕ್ಕಳಲ್ಲಿ ಹೆಚ್ಚಿನ ಸೋಂಕು ಕಂಡುಬಂದಿಲ್ಲ ಎಂದು ಅವರು ತಿಳಿಸಿದರು.