ಅಧ್ಯಕ್ಷ ಸ್ಥಾನದ ವಿಚಾರ: ಕಾಂಗ್ರೆಸ್ ಕಾರ್ಯಕಾರಿ ಸಭೆ ಬಳಿಕ ರಾಹುಲ್ ಹೇಳಿದ್ದೇನು?
Saturday, October 16, 2021
ನವದೆಹಲಿ: ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ.
ಮುಂಬರುವ ಚುನಾವಣೆ, ಪಕ್ಷದ ಅಂತರಿಕ ವಿಷಯಗಳ ಜೊತೆಗೆ ಬಹುಕಾಲ ಬಗೆಹರಿಯದ ಸಮಸ್ಯೆ ಆಗಿರುವ ರಾಷ್ಟ್ರೀಯ ಅಧ್ಯಕ್ಷರ ನೇಮಕದ ವಿಚಾರವಾಗಿಯೂ ಚರ್ಚೆ ನಡೆದಿದೆ.
ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿರಿಯ ನಾಯಕರು ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷಗಾದಿ ವಹಿಸಿಕೊಳ್ಳುವ ಕುರಿತು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಮತ್ತೊಮ್ಮೆ ಪಕ್ಷದ ಚುಕ್ಕಾಣಿ ಹಿಡಿಯಬೇಕೆಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಕಾಂಗ್ರೆಸ್‌ನ ನಾಯಕರು ಅವಿರೋಧವಾಗಿ ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ಆ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.