
ಊಹಾಪೋಹಗಳಿಗೆ ತೆರೆ: ರಾಷ್ಟ ರಾಜಕಾರಣ ಪ್ರವೇಶಿಸುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
Wednesday, October 6, 2021
ನವದೆಹಲಿ: ಇತ್ತೀಚೆಗೆ ಸಿದ್ದರಾಮಯ್ಯ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದೂ, ಇದು ಭಾರೀ ಚರ್ಚೆಗೆ ಗ್ರಾಸವಾಗಿದ್ದು. ಈ ಭೇಟಿ ಮೂಲಕ ಸಿದ್ದರಾಮಯ್ಯ ಅಧಿಕೃತ ವಾಗಿ ರಾಷ್ಟ್ರ ರಾಜಕಾರಣ ಪ್ರವೇಶಿಸುತ್ತಾರೆ ಎಂದೇ ಬಿಂಬಿತವಾಗಿತ್ತು.
ಆದರೆ ಈ ಎಲ್ಲಾ ಊಹಾಪೋಹಗಳಿಗೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ನಾನು ರಾಜ್ಯಕ್ಕಷ್ಟೇ ಸೀಮಿತವಾಗಿರುವೆ. ಈ ಹಿಂದೆ ರಾಹುಲ್ ಗಾಂಧಿ ಆಹ್ವಾನಿಸಿದಾಗಲೂ ಇದೇ ಮಾತನ್ನು ಹೇಳಿರುವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನನಗೆ ರಾಷ್ಟ್ರ ರಾಜಕಾರಣಕ್ಕೆ ಸೋನಿಯಾ ಗಾಂಧಿ ಆಹ್ವಾನ ನೀಡಿಲ್ಲ. ನನ್ನ ಇತ್ತೀಚಿನ ಭೇಟಿ ಎಂದಿನಂತೆ ಸೌಹಾರ್ದ ಭೇಟಿಯಾಗಿದ್ದು, ಇದರಲ್ಲಿ ಬೇರೆ ಕಾರಣಗಳಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಭೇಟಿ ಸಂದರ್ಭದಲ್ಲಿ ರಾಷ್ಟ್ರ ಮತ್ತು ರಾಜ್ಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.