ಪತಿಯಿಂದ ದೂರವಾಗಿದ್ದ ಮಹಿಳೆಯ ನಂಬಿಸಿ ಸುಖ ಪಡೆದ: ಮೋಸ ಅರಿವಾದ ಯುವತಿಯಿಂದ ವಿಷ ಸೇವನೆ
Monday, October 18, 2021
ಮಡಿಕೇರಿ: ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಯುವತಿ ಮತ್ತೆ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಇಲ್ಲಿನ ಕೈಕೇರಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವತಿಯನ್ನು ರಮ್ಯಾ ಎಂದು ಗುರುತಿಸಲಾಗಿದ್ದು, ಈಕೆ ಇತ್ತೀಚೆಗೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ತಾಯಿ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಳು.
ಆದರೆ ಮತ್ತೆ ರಮ್ಯಾಳಿಗೆ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.
ಈ ಬಗ್ಗೆ ಗೋಣಿಕೊಪ್ಪ ಠಾಣೆಯಲ್ಲಿ ರಮ್ಯ ಸಹೋದರ ದೂರು ದಾಖಲಿಸಿದ್ದಾರೆ.
ಕೌಟುಂಬಿಕ ಕಾರಣದಿಂದ ರಮ್ಯಾ ಮೊದಲ ಪತಿಯಿಂದ ದೂರವಿದ್ದಳು. ಈ ಬಳಿಕ ವ್ಯಕ್ತಿಯೊಬ್ಬ ರಮ್ಯಾಳನ್ನು ನಂಬಿಸಿ ಮೋಸ ಮಾಡಿದ್ದಾನೆಂದು ಆಕೆ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.
ಮೊದಲ ಪತಿಯಿಂದ ದೂರವಾಗಿದ್ದ ಬಳಿಕ ಯುವನೋರ್ವನಿಂದ ಮೋಸಹೋದ ಹಿನ್ನೆಲೆಯಲ್ಲಿ