ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿಗೆ ಭರ್ಜರಿ ಗೆಲುವು
Sunday, October 3, 2021
ಕೋಲ್ಕತ್ತಾ: ಕಳೆದ ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸೋಲನುಭವಿಸಿದ್ದ ಮಮತಾ ಬ್ಯಾನರ್ಜಿ ಉಪ ಚುನಾವಣೆಯಲ್ಲಿ ಭವಾನಿಪುರದಿಂದ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಇಂದು ನಡೆದ ಮತ ಎಣಿಕೆಯಲ್ಲಿ ಮಮತಾ ಬ್ಯಾನರ್ಜಿ 58 ಸಾವಿರಕ್ಕೂ ಅಧಿಕ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇವರ ಪ್ರತಿಸ್ಪರ್ಧಿ ಬಿಜೆಪಿಯ ಪ್ರಿಯಾಂಕಾ ತಿಬ್ರೇವಾಲ್ 25000ದಷ್ಟು ಮತಗಳನ್ನಷ್ಟೇ ಪಡೆದಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಸೋತ ಹಿನ್ನೆಲೆಯಲ್ಲಿ ಭವಾನಿಪುರದಿಂದ ಉಪಚುನಾವಣೆಯಲ್ಲಿ ಕಣಕ್ಕಿಳಿದಿದ್ದು, ಜಯಗಳಿಸುವ ಮೂಲಕ ಅವರ ಮುಖದಯಮಂತ್ರಿ ಗಾದಿ ಭದ್ರವಾಗಿದೆ.