ಅಪ್ರಾಪ್ತ ನಾದಿನಿ ಮೇಲೆ ಅತ್ಯಾಚಾರಗೈದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ....
Friday, December 10, 2021
ಕುಂದಾಪುರ: ನಾದಿನಿ ಮೇಲೆ ಅತ್ಯಾಚಾರಗೈದ ಪ್ರಕರಣದ ಆರೋಪಿಗೆ ಪೋಕ್ಸೋ ನ್ಯಾಯಾಲಯ 10 ವರ್ಷ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
2018ರಲ್ಲಿ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸುರೇಶ್ ಮರಾಠಿ (29) ಎಂಬಾತ ಅಪರಾಧಿಯಾಗಿದ್ದು ಈತ ತನ್ನ ಹೆಂಡತಿ ತಂಗಿಯನ್ನು ಕಾಡಿಗೆ ಕರೆದೊಯ್ದು ಅಲ್ಲಿನ ಮರವೊಂದರ ಮೇಲೆ ಗುಡಿಸಲು ಸಿದ್ದಪಡಿಸಿ ನಿರಂತರವಾಗಿ ಮೂರು ದಿನಗಳ ಕಾಲ ಆಕೆ ಮೇಲೆ ಅತ್ಯಾಚಾರ ನಡೆಸಿದ್ದ. 17 ವರ್ಷ ಪ್ರಾಯದ ಸಂತ್ರಸ್ತ ಯುವತಿ ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಅಪರಾಧಿಗೆ 10 ವರ್ಷ ಸಜೆ, 20 ಸಾವಿರ ದಂಡ ವಿಧಿಸಿದ್ದು ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಸಜೆ ವಿಧಿಸಿ ಆದೇಶಿಸಲಾಗಿದೆ.
ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ಗುರುವಾರ ತೀರ್ಪು ಪ್ರಕಟಿಸಿದ್ದಾರೆ.