ಪೊಲೀಸರ ವಾಹನ ಕಂಡು ಪರಾರಿಯಾದ ಹೆಲ್ಮೆಟ್ ಧರಿಸದ ಸವಾರರು- ESCAPE ವೇಳೆ ವಿದ್ಯಾರ್ಥಿನಿಗೆ ಗಾಯ!
Monday, December 20, 2021
ಉಡುಪಿ : ಹೆಲ್ಮೆಟ್ ಹಾಕಿಕೊಳ್ಳದೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ಸವಾರರು ಎದುರಿಗೆ ಬಂದ ಪೊಲೀಸರ ಟ್ರಾಫಿಕ್ ಇಂಟರ್ ಸೆಪ್ಟರ್ ವಾಹನವನ್ನು ಕಂಡು ಪರಾರಿಯಾಗಿದ್ದು ಈ ವೇಳೆ ವಿದ್ಯಾರ್ಥಿನಿಯೋರ್ವಳಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದಾರೆ.
ಈ ಘಟನೆ ಕುಂದಾಪುರದಲ್ಲಿ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಕುಂದಾಪುರದ ಹೊಸ ಬಸ್ ನಿಲ್ದಾಣ ಸಮೀಪ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.ಏಕ ಮುಖ ಸಂಚಾರದ ರಸ್ತೆಯಲ್ಲಿ ರಾಂಗ್ ಸೈಡ್ ನಿಂದ ಹೆಲ್ಮೆಟ್ ಧರಿಸದೇ ಬರುತ್ತಿದ್ದ ಸ್ಕೂಟರ್ ಸವಾರರನ್ನು ಕಂಡು ಟ್ರಾಫಿಕ್ ಇಂಟರ್ ಸೆಪ್ಟರ್ ನಲ್ಲಿ ಸಾಗುತ್ತಿದ್ದ ಅ
ಸಂಚಾರಿ ಪೊಲೀಸರು ಸ್ಕೂಟರನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರು . ಆ ವೇಳೆ ಸ್ಕೂಟರ್ ವೇಗವನ್ನು ಹೆಚ್ಚಿಸಿದ ಸವಾರ ಎಸ್ಕೇಪ್ ಆಗುವ ಭರದಲ್ಲಿ ಎದುರಿನಿಂದ ಸಾಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದಾರೆ.
ವಿದ್ಯಾರ್ಥಿನಿಗೆ ಸಣ್ಣಪುಟ್ಟ ಗಾಯವಾಗಿದ್ದು ಘಟನೆಯಿಂದ ಬೆಚ್ಚಿ ಬಿದ್ದಿದ್ದಳು.
ಪರಾರಿಯಾಗಿರುವ ಸ್ಕೂಟರ್ ಸವಾರನ ಶೋಧವನ್ನು ಪೊಲೀಸರು ನಡೆಸುತ್ತಿದ್ದಾರೆ.