-->
ads hereindex.jpg
Nelyadi-ಬೈಕ್ ಪಲ್ಟಿಯಾಗಿ ಗಾಯಗೊಂಡಿದ್ದ‌ ಮಹಿಳೆ ಸಾವು- ಪತಿ ಮಕ್ಕಳು ಪಾರು

Nelyadi-ಬೈಕ್ ಪಲ್ಟಿಯಾಗಿ ಗಾಯಗೊಂಡಿದ್ದ‌ ಮಹಿಳೆ ಸಾವು- ಪತಿ ಮಕ್ಕಳು ಪಾರು


ಮಂಗಳೂರು; ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಬಳಿ ಡಿ.15ರಂದು ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದು   ಮಹಿಳೆಯ ಪತಿ ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪೆರಾಬೆ ಗ್ರಾಮದ ಅತ್ರಿಮಜಲು ನಿವಾಸಿ ದಿನೇಶ್ ಎಂಬವರ ಪತ್ನಿ ಗೀತಾ (30) ಸಾವನ್ನಪ್ಪಿದವರು.

 ದಿನೇಶ್​, ಗೀತಾ ಹಾಗೂ ಅವರ ಇಬ್ಬರು ಮಕ್ಕಳು ಡಿ.15ರಂದು ಬೆಳಗ್ಗೆ ಬೈಕ್​ನಲ್ಲಿ ಆಲಂಕಾರು-ನೆಲ್ಯಾಡಿ ಮಾರ್ಗವಾಗಿ ಸೌತಡ್ಕ ದೇವಸ್ಥಾನಕ್ಕೆ ಹೋಗುತ್ತಿದ್ದ  ವೇಳೆ ನೆಲ್ಯಾಡಿ ಗ್ರಾಮದ ಕೊಂತ್ರಿಜಾಲು ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಬಳಿ ಬೈಕ್​ ಪಲ್ಟಿಯಾಗಿತ್ತು.

 ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಗೀತಾ ಗಂಭೀರವಾಗಿ ಗಾಯಗೊಂಡಿದ್ದರು. ಬೈಕ್ ಸವಾರ ದಿನೇಶ್​ ಮತ್ತು ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿತ್ತು.ಗಂಭೀರವಾಗಿ ಗಾಯಗೊಂಡಿದ್ದ ಗೀತಾರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ads on article

Advertise in articles 1

advertising articles 2