ಮಂಗಳೂರಿನಲ್ಲಿ ವಿದ್ಯಾರ್ಥಿನಿಯಲ್ಲಿ OMICRON- ಟ್ರಾವೆಲ್ ಹಿಸ್ಟರಿ ಇಲ್ಲದೆ ಪತ್ತೆಯಾಗುತ್ತಿದೆ ಈ ವೈರಸ್!
Monday, December 20, 2021
ಮಂಗಳೂರು; ಮಂಗಳೂರಿನಲ್ಲಿ ಮತ್ತೊಂದು ಓಮಿಕ್ರಾನ್ ವೈರಸ್ ವಿದ್ಯಾರ್ಥಿನಿ ಯೋರ್ವಳಲ್ಲಿ ಪತ್ತೆಯಾಗಿದೆ.
ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳಲ್ಲಿ ಓಮಿಕ್ರಾನ್ ವೈರಸ್ ಇರುವುದು ಇಂದು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 5 ಓಮಿಕ್ರಾನ್ ವೈರಸ್ ಪ್ರಕರಣ ಪತ್ತೆಯಾಗಿದ್ದು ಇದೀಗ ಸೋಂಕಿತರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.
ಶನಿವಾರ ಎರಡು ವಿದ್ಯಾಸಂಸ್ಥೆ ಯ 5 ವಿದ್ಯಾರ್ಥಿಗಳಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿತ್ತು. ಕುರ್ನಾಡು ಜೆಎನ್ ವಿ ಶಾಲೆಯ ನಾಲ್ಕು ವಿದ್ಯಾರ್ಥಿಗಳಲ್ಲಿ ಮತ್ತು ಶ್ರೀನಿವಾಸ ನರ್ಸಿಂಗ್ ಕಾಲೇಜಿನ ಓರ್ವ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿತ್ತು. ಇದೀಗ ಮತ್ತೊರ್ವ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಗೆ ಓಮಿಕ್ರಾನ್ ಇರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೆ ಟ್ರಾವೆಲ್ ಹಿಸ್ಟರಿ ಇಲ್ಲದೆ ಇರುವ ವಿದ್ಯಾರ್ಥಿಗಳಲ್ಲಿ ಓಮಿಕ್ರಾನ್ ಕಾಣಿಸಿಕೊಳ್ಳುತ್ತಿರುವುದು ಆತಂಕ ಸೃಷ್ಟಿಸಿದೆ.