
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ...!!
Tuesday, December 14, 2021
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಹಾವೇರಿ, ಬೆಳಗಾವಿ, ಗದಗ, ಯಾದಗಿರಿ, ವಿಜಯಪುರ, ಕೊಪ್ಪಳ, ಧಾರವಾಡದಲ್ಲಿ ಒಣ ಹವೆ ಮುಂದುವರಿಯಲಿದೆ.
ಸೋಮವಾರ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಿದ್ದು, ಚಾಮರಾಜನಗರ ಜಿಲ್ಲೆಯ ಮಲೈಮಹದೇಶ್ವರದಲ್ಲಿ 2 ಸೆಂ.ಮೀ ಮಳೆ ದಾಖಲಾಗಿದೆ.