ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ- ಬಂಧಿಸಲು ಹೋದ ಪೊಲೀಸರಿಗೂ ಕಲ್ಲು ಎಸೆದ ವಿದ್ಯಾರ್ಥಿಗಳು!
ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹದ್, ಅಬುತಹರ್, ಮುಹಮ್ಮದ್ ನಾಸಿಫ್, ಆದರ್ಶ ಬಂಧಿತ ವಿದ್ಯಾರ್ಥಿಗಳು. ಘಟನೆಯಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಹಾಗೂ ಐದು ಮಂದಿ ಪೊಲೀಸರು ಗಾಯಗೊಂಡಿದ್ದು, ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ .
ಮೂ್ರನೇ ವರ್ಷದ ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ ಕಲಿಯುತ್ತಿರುವ ಕೇರಳ ಮೂಲದ ಆದರ್ಶ ಪ್ರೇಮಕುಮಾರ್ ತನ್ನ ಸ್ನೇಹಿತ ಅಭಿರಾಮಿಯನ್ನು ನಿನ್ನೆ ಸಂಜೆ ಸುಮಾರು 7 ಗಂಟೆಗೆ ಭೇಟಿ ಮಾಡಿ ಮಾತನಾಡಿಸುವ ಸಂದರ್ಭದಲ್ಲಿ ಸಿನಾನ್ ಎಂಬವನು 8 ವಿದ್ಯಾರ್ಥಿಗಳೊಂದಿಗೆ ಬಂದು ಇಂಟರ್ ಲಾಕ್ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಆದರ್ಶ ಹಾಗು ಮೊಹಮ್ಮದ್ ನಸಿಪ್ ಗಾಯವಾಗಿದ್ದರೆ ಗಲಾಟೆ ಬಿಡಿಸಲು ಬಂದಿದ್ದ ಆದರ್ಶ ಅವರ ಸ್ನೇಹಿತರಾದ ಅದೇ ಹಾಸ್ಟೇಲ್ ನ ಶನಿನ್ ಮತ್ತು ಶ್ರವಣ ಅವರಿಗೆ ಜೀವ ಬೆದರಿಕೆಯೊಡ್ಡಲಾಗಿದೆ ಎಂದು ದೂರಲಾಗಿದೆ.
ಆರೋಪಿಗಳನ್ನು ಬಂಧಿಸಲು ಪೊಲೀಸರು ಹಾಸ್ಟೆಲ್ ಗೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಾಸ್ಟೆಲ್ ನ ವಿದ್ಯಾರ್ಥಿಗಳು ಇಂಟರ್ ಲಾಕ್, ಕಲ್ಲು ಹಾಗೂ ಕುರ್ಚಿಗಳನ್ನು ಎಸೆದು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ