MANGALORE

ವಿಟ್ಲದಲ್ಲಿ 10ನೇ ತರಗತಿ ಬಾಲಕ ನೇಣು ಬಿಗಿದು ಆತ್ಮಹತ್ಯೆ


ವಿಟ್ಲ: SSLC ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ.

ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ ಸೋಜ ಎಂಬವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ.

ಅನಿಸಿತ್ ಡಿಸೋಜ  10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಈತ ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದು,ಬೆಳಿಗ್ಗೆ ನೋಡಿದಾಗ  ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟ್ಯಾಗ್‌ಗಳು: MANGALORE