-->

ಬಿಎಸ್‌ವೈ ಮೊಮ್ಮಗಳು ನೇಣಿಗೆ ಶರಣು

ಬಿಎಸ್‌ವೈ ಮೊಮ್ಮಗಳು ನೇಣಿಗೆ ಶರಣು


ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಮೊಮ್ಮಗಳು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕೊನೆಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿ
ಕೊಂಡವರು. 


ಸೌಂದರ್ಯ ಅವರು ಇಂದು ಬೆಂಗಳೂರಿನ ತಮ್ಮ ಅಪಾರ್ಟ್ ಮೆಂಟಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .  ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ವಿಧಿವಿಧಾನಗಳು ನಡೆಯುತ್ತಿವೆ.


ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೌಂದರ್ಯ ಅವರು ತಾವು ವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಮಲ್ಲಿಗೆ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವಷ್ಟರ ಹೊತ್ತಿಗೆ ಅವರು ಸಾವನ್ನಪ್ಪಿದ್ದರು.

ಸೌಂದರ್ಯ ಅವರು ಗರ್ಭಿಣಿಯಾಗಿದ್ದರು ಎಂದು ಹೇಳಲಾಗುತ್ತಿದ್ದು, ಕೌಟುಂಬಿಕ ಕಲಹದಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗಿದೆ. ಸೌಂದರ್ಯ ಅವರ ವಿವಾಹ ಕಳೆದ ವರ್ಷವಷ್ಟೇ ನಡೆದಿತ್ತು.  ಸೌಂದರ್ಯ ಅವರು ನಗರದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕರ್ತವ್ಯ ಮಾಡುತ್ತಿದ್ದರು.Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99