ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ( weekend curfew) ರದ್ದು!
Friday, January 21, 2022
ಬೆಂಗಳೂರು : ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಧಿಸಲಾಗಿದ್ದ ವೀಕೆಂಡ್ ಕರ್ಫ್ಯೂ ( weekend curfew) ರದ್ದುಗೊಳಿಸುವುದಾಗಿ ಸರ್ಕಾರ ಇಂದು ಘೋಷಿಸಿದೆ.
ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ವಾರಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ವಿಧಿಸಿ ಸರ್ಕಾರ ಕಠಿಣ ಕ್ರಮ ಕೈಗೊಂಡಿತ್ತು. ಇದೀಗ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾರ್ಗಸೂಚಿಗಳನ್ನು ಪರಿಷ್ಕರಣೆ ಮಾಡಿ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಮತ್ತೊಂದೆಡೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಮುಂದುವರೆಯಲಿದೆ. ಸರ್ಕಾರದ ಉಳಿದೆಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಜ. 29ರವರೆಗೆ ಶಾಲೆ-ಕಾಲೇಜುಗಳನ್ನು ಬಂದ್ ಮಾಡಲಾಗುತ್ತಿದ್ದು ನಗರದಲ್ಲಿ ಶಾಲಾರಂಭದ ಬಗ್ಗೆ ಜ.29ರಂದು ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುವುದು. ಬೆಂಗಳೂರು ಹೊರತುಪಡಿಸಿ ಉಳಿದೆಲ್ಲ ಕಡೆ ಶಾಲೆ ಇರಲಿದ್ದು, ಸೋಂಕು ಹೆಚ್ಚಿದರೆ ಮಾತ್ರ ರಜೆಯನ್ನು ನೀಡಲಾಗುವುದು ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ