ಹಿಜಾಬ್ ಕೇಸರಿ ಘರ್ಷಣೆ- 3 ದಿನ ಹೈಸ್ಕೂಲ್ ಕಾಲೇಜುಗಳಿಗೆ ರಜೆ
Tuesday, February 8, 2022
ಬೆಂಗಳೂರು ; ರಾಜ್ಯದ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿಶಾಲುಗಳ ವಿಚಾರದಲ್ಲಿ ಘರ್ಷಣೆ ನಡೆದಿರುವ ಹಿನ್ನೆಲೆಯಲ್ಲಿ ಹೈಸ್ಕೂಲ್ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದ ಎಲ್ಲಾ , ಹೈಸ್ಕೂಲ್, ಪಿಯು ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ .
ಹಿಜಾಬ್ , ಕೇಸರಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಮತ್ತೊಂದೆಡೆ ವಿದ್ಯಾರ್ಥಿಗಳ ನಡುವೆ ಸಂಘರ್ಷ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.