ಹಣ ವಂಚನೆ ಪ್ರಕರಣ ಸಂಬಂಧ Enforcement Directorate (ED) ಅಧಿಕಾರಿಗಳು ವಿವಿಧೆಡೆ ದಾಳಿಯನ್ನು ನಡೆಸಿದ್ದಾರೆ.
ಈ ಪೈಕಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಅವರ ಮುಂಬೈಯಲ್ಲಿರುವ ಮನೆಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮನೆಯೊಳಗೆ ಪರಿಶೀಲನೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.