ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಗಾನ ಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ

 ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್( 92) ಅವರು ಇಂದು ಚಿಕಿತ್ಸೆ ಫಲ ಇಂದು ಕೊನೆಯುಸಿರೆಳೆದಿದ್ದಾರೆ. ಅವರು ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

 ಲತಾ ಮಂಗೇಶ್ಕರ್ ಅವರಿಗೆ  ಜನವರಿ 9ರಂದು ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಲತಾ ಮಂಗೇಶ್ಕರ್​ ಅವರನ್ನು ಮುಂಬಯಿನ ಬ್ರೀಚ್ ಕ್ಯಾಂಡಿ ಹಾಸ್ಪಿಟಲ್ ಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೊರೊನಾ ಸೋಂಕು ಮತ್ತು ನ್ಯುಮೋನಿಯಾದಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರು.  

ಲತಾ ಮಂಗೇಶ್ಕರ್ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಅವರಿಗೆ ಅಳವಡಿಸಿದ್ದ ವೆಂಟಿಲೇಟರ್​  ತೆಗೆದುಹಾಕಲಾಗಿತ್ತು.ಆದರೆ ಶನಿವಾರದಿಂದ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು ಅವರನ್ನು ವೆಂಟಿಲೇಟರ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಗಾನಕೋಗಿಲೆ ಕೊನೆಯುಸಿರೆಳೆದಿದ್ದಾರೆ.




ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW