ಉಡುಪಿ Resort ನಲ್ಲಿ ಅನ್ಯ ಕೋಮಿನ ಜೋಡಿ ಪೊಲೀಸ್ ವಶಕ್ಕೆ
Thursday, February 17, 2022
ರೆಸಾರ್ಟ್ನಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿಯನ್ನು, ಹಿಂದೂಪರ ಸಂಘಟನೆ ಕಾರ್ಯಕರ್ತರು ದೂರು ಹಿನ್ನೆಲೆ ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ಬಡಾನಿಡಿಯೂರಿನ ರೆಸಾರ್ಟ್‌ನಲ್ಲಿ ಅನ್ಯಕೋಮಿನ ಜೋಡಿಯೊಂದು ರೆಸಾರ್ಟ್‌ನಲ್ಲಿ ತಂಗಿರುವ ಮಾಹಿತಿ ಪಡೆದ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಸ್ಥಳಕ್ಕೆ ಭೇಟಿ ನೀಡಿ ಪೊಲೀಸರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಅನ್ಯಕೋಮಿನ ಜೋಡಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಇಬ್ಬರ ಪೋಷಕರನ್ನು ಕರೆಸಿ ಬುದ್ದಿ ಹೇಳಿ ಮನೆಗೆ ಕಳುಹಿಸಿದರು.