UDUPI- ಪ್ರಯಾಣಿಕರಿದ್ದ ವೇಳೆಯೆ ಬಸ್ ನಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ; ಸುಟ್ಟು ಕರಕಲಾದ ಖಾಸಗಿ ಬಸ್
Wednesday, February 23, 2022
ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸೊಂದು ಸುಟ್ಟು ಕರಕಲಾದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಬಳ್ಳಾರಿಯ ಕೊಟ್ಟೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್ ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿತು, ಕೂಡಲೇ ಎಚ್ಚೆತ್ತುಕೊಂಡ ಬಸ್ ಸಿಬ್ಬಂದಿ ಪ್ರಯಾಣಿಕರನ್ನು ಕೆಳಗೆ ಇಳಿಸಿ ದೊಡ್ಡ ಅನಾಹುತ ತಪ್ಪಿಸಿದರು.
ಆದರೆ ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ ನಷ್ಟ ಉಂಟಾಗಿದೆ. ಘಟನೆ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..