
ಅಪ್ರಾಪ್ತೆ ಪುತ್ರಿ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ 10 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಹೈಕೋರ್ಟ್!
ಬೆಂಗಳೂರು: 14 ವರ್ಷದ ಅಪ್ರಾಪ್ತೆ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ತಂದೆಗೆ ಹೈಕೋರ್ಟ್ 10 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೆ ಈ ಪ್ರಕರಣದಲ್ಲಿ ಸಂತ್ರಸ್ತೆಯ ತಂದೆಯೇ ಅಪರಾಧಿ ಎಂದು ತೀರ್ಮಾನಿಸಿದೆ.
ಆಟೋ ರಿಕ್ಷಾ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ತಂದೆಯನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದ ಬೆಳಗಾವಿಯ ಪೊಕ್ಸೊ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸರಕಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಎಚ್.ಟಿ. ನರೇಂದ್ರಪ್ರಸಾದ್ ಹಾಗೂ ನ್ಯಾ. ರಾಜೇಂದ್ರ ಬದಾಮಿಕರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ. ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಿದೆ.