ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಉಡುಪಿಯಲ್ಲಿ ನಿಷೇಧಿತ ಪಚ್ಚಿಲೆ ಅಜೀರ್ ಮೀನು ತೆಗೆಯುತ್ತಿದ್ದ 7 ಮಂದಿ ಬಂಧನ


ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲದ ಸಮುದ್ರತೀರದಲ್ಲಿ ನಿಷೇಧಿತ ಪಚ್ಚಿಲೆ ಅಜೀರ್ ಮೀನು ತೆಗೆಯುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಅನ್ಯರಾಜ್ಯದ  ಮೀನುಗಾರರು ಸದ್ಯ ಪೊಲೀಸರ ವಶದಲ್ಲಿದ್ದು, ಬಂಡೆ ಕಲ್ಲಿಗೆ ಅಂಟಿಕೊಂಡಿರುವ ಪಚ್ಚಿಲೆ ಮೀನು ತೆಗೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಮೀನುಗಾರರು ಅವರನ್ನು ಉಚ್ಚಿಲದ ಸುಭಾಷ್ ರಸ್ತೆ ಬಳಿಯ ಸಮುದ್ರ ಕಿನಾರೆಗೆ ತಂದಿದ್ದರು. 

ಬಳಿಕ ಪಡುಬಿದ್ರೆ ಪೊಲೀಸರಿಗೆ ಮಾಹಿತಿ ನೀಡಿ ಅವರ ವಶಕ್ಕೆ ನೀಡಿದ್ದಾರೆ. ಸದ್ಯ ಅವರು ಮೀನು ಹಿಡಿಯಲು ಬಳಸುತ್ತಿದ್ದ ದೋಣಿಯನ್ನು ಕೂಡ ದಂಡೆಗೆ ತಂದು ನಿಲ್ಲಿಸಲಾಗಿದೆ. ಕರ್ನಾಟಕ ಕರಾವಳಿ ಪರಿಸರದಲ್ಲಿ ಬಂಡೆಗೆ ಅಂಟಿಕೊಂಡಿರುವ ಈ ಜಾತಿಯ ಮೀನನ್ನು ಹಿಡಿಯುವುದು ನಿಷೇಧವಿದೆ..












ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW