-->

ನಿಶ್ಚಿತಾರ್ಥಕ್ಕೆ ಹೊರಟ ಬಸ್ ಪಲ್ಟಿ: ಮಗು ಸೇರಿದಂತೆ 8ಮಂದಿ ಬಲಿ; 45 ಜನರಿಗೆ ಗಾಯ

ನಿಶ್ಚಿತಾರ್ಥಕ್ಕೆ ಹೊರಟ ಬಸ್ ಪಲ್ಟಿ: ಮಗು ಸೇರಿದಂತೆ 8ಮಂದಿ ಬಲಿ; 45 ಜನರಿಗೆ ಗಾಯ

ಚಿತ್ತೂರು: ಮದುವೆ ನಿಶ್ಚಿತಾರ್ಥಕ್ಕೆಂದು ಹೊರಟಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸಣ್ಣ ಮಗುವೊಂದು ಸೇರಿ 8 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯ ಬಳಿಯ ಬಕರಾಪೇಟ ಕಣುಮಾ ಎಂಬಲ್ಲಿ ಸಂಭವಿಸಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 45 ಮಂದಿ ಗಾಯಗೊಂಡಿದ್ದಾರೆ.

ಮಾಲಿಶೆಟ್ಟಿ ವೆಂಕಪ್ಪ (60), ಮಾಲಿಶೆಟ್ಟಿ ಮುರಳಿ (45), ಕಾಂತಮ್ಮ (40), ಮಾಲಿಶೆಟ್ಟಿ ಗಣೇಶ್ (40), ಜೆ.ಯಶಸ್ವಿನಿ (8), ಚಾಲಕ ನಬಿ ರಸೂಲ್ ಮತ್ತು ಕ್ಲೀನರ್ ಮೃತಪಟ್ಟ ದುರ್ದೈವಿಗಳೆಂದು ಗುರುತಿಸಲಾಗಿದೆ.

ನಿಶ್ಚಿತಾರ್ಥಕ್ಕೆಂದು ಹೊರಟಿದ್ದ ಖಾಸಗಿ ಬಸ್ ನಲ್ಲಿ ಸುಮಾರು 63 ಮಂದಿ ಪ್ರಯಾಣಿಕರಿದ್ದರು. ಚಾಲಕನ ಅತಿ ವೇಗದ ಚಾಲನೆಯೇ ಈ ದುರಂತಕ್ಕೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗಾಯಾಳುಗಳನ್ನು ನಾರಾವರಿಪಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದರಲಯ ಓರ್ವ ಮಗು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಗಾಯಾಳುಗಳನ್ನು ತಿರುಪತಿ ರುವಾ ಮತ್ತು ಸ್ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. 

ಅನಂತಪುರ ಜಿಲ್ಲೆಯ ಧರ್ಮಾವರಂನ ರಾಜೇಂದ್ರ ನಗರದ ವೇಣು ಎಂಬವರಿಗೆ ಚಿತ್ತೂರು ಜಿಲ್ಲೆಯ ನಾರಾಯಣವನಂ ಮೂಲದ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ತಿರುಚಾನೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವರ ವೇಣು ಕುಟುಂಬವು ಇತರೆ 63 ಮಂದಿಯೊಂದಿಗೆ ಖಾಸಗಿ ಬಸ್‌ನಲ್ಲಿ ಮಧ್ಯಾಹ್ನ 3.30 ಕ್ಕೆ ಧರ್ಮಾವರಂನಿಂದ ಹೊರಟಿತ್ತು. ಚಾಲಕ ವೇಗವಾಗಿ ವಾಹನ​ ಚಲಾಯಿಸಿದ್ದರಿಂದ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ, ಸುಮಾರು 100 ಅಡಿಯ ಕಣಿವೆಗೆ ಉರುಳಿದೆ.

ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಹಲವರ ತಲೆಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡವರಲ್ಲಿ 10ಕ್ಕೂ ಅಧಿಕ ಮಂದಿ ಮಕ್ಕಳಿದ್ದಾರೆ. ಶಾಸಕ ಚೇವಿರೆಡ್ಡಿ ಭಾಸ್ಕರ್ ರೆಡ್ಡಿ ತಿರುಪತಿ ರುವಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬೆಳಗ್ಗೆ 10:30ರವರೆಗೂ ಘಟನೆ ಬೆಳಕಿಗೆ ಬಂದಿರಲಿಲ್ಲ. ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಗಾಯಾಳುಗಳ ಕಿರುಚಾಟ ಕೇಳಿ ಕಣಿವೆಯತ್ತ ನೋಡಿದಾಗ ಬಸ್ ಬಿದ್ದಿರುವುದು ತಿಳಿದು ಬಂದಿದೆ‌. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

ವಿಷಯ ತಿಳಿದ ತಕ್ಷಣ ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಮತ್ತು ತಿರುಪತಿ ನಗರ ಎಸ್​ಪಿ ವೆಂಕಟ ಅಪ್ಪಲನಾಯ್ಡು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99