ಪಂಚರಾಜ್ಯ ಚುನಾವಣೆಯಲ್ಲಿ ಜಯಭೇರಿ : BJP ಯಿಂದ ಸಂಭ್ರಮಾಚರಣೆ
Thursday, March 10, 2022
ಪಂಚರಾಜ್ಯ ಚುನಾವಣೆಯಲ್ಲಿ
ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆ ಮುನ್ನಡೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ ನಡೆಸಿತು. ಜಿಲ್ಲೆಯಲ್ಲಿ ಬಿಜೆಪಿ ಕಾರ್ಯ ಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದ್ದು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ದೇಶದ ಜನತೆ ಹಿಂದುತ್ವ ಮತ್ತು ಅಭಿವೃದ್ದಿಗೆ ಮತ ನೀಡಿದ್ದಾರೆ.
ವಿಪಕ್ಷಗಳ ಜಾತಿ ರಾಜಕಾರಣ, ಕುಟುಂಬ ರಾಜಕಾರಣವನ್ನು ಜನ ತಿರಸ್ಕಾರ ಮಾಡಿದ್ದಾರೆ.
ಇದು ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿ.
ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.