ಉಡುಪಿ-ಬೈಕ್‌ಗೆ ಟಿಪ್ಪರ್ ಢಿಕ್ಕಿ; ಬೈಕ್ ಸವಾರ ಸಾವು
Friday, March 4, 2022
ಬೈಕ್‌ಗೆ ಟಿಪ್ಪರ್ ಢಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ರಸ್ತೆಯಲ್ಲಿ ನಡೆದಿದೆ.
ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಮೃತ ದುರ್ದೈವಿ. ಇನ್ನಂಜೆ – ಕಲ್ಲುಗುಡ್ಡೆ – ಬಂಟಕಲ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಟಿಪ್ಪರ್ ನ ಹಿಂಬದಿಯ ಚಕ್ರದಡಿಗೆ ಸಿಲುಕಿದ ಬೈಕ್ ಸಂಪೂರ್ಣ ನಜ್ಹುಗುಜ್ಜಾಗಿದೆ. ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..