ಉಡುಪಿ; ನೀರಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಸಾವು
Thursday, March 31, 2022
ಹೊಳೆ ನೀರಿನಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ನೀರಿನ ಸೆಳೆತಕ್ಕೆ ಸಿಕ್ಕಿ ಮುಳುಗಿ ಸಾವನ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಹೊಳೆಯಲ್ಲಿ ಇಂದು ನಡೆದಿದೆ.
ಉಳ್ಳೂರಿನ ಸುಮಂತ ಮಡಿವಾಳ (18), ಗಣೇಶ್ (18) ಮೃತ ವಿದ್ಯಾರ್ಥಿಗಳಾಗಿದ್ದಾರೆ. ಶಂಕರನಾರಾಯಣ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದ ಸುಮಂತ್ ಹಾಗೂ ಇಂದು ಮಧ್ಯಾಹ್ನದ ವೇಳೆಗೆ ಸ್ನಾನಕ್ಕೆಂದು ನೀರಿಗಿಳಿದಾಗ ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿ ಸಾವನ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅಮಾಸೆಬೈಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..