ಕಾಪು ಮಾರಿ ಪೂಜೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ
Tuesday, March 22, 2022
ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಯ ಸುಗ್ಗಿ ಮಾರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರುಗಳಿಗೆ ಅವಕಾಶ ನಿರಾಕರಣೆ ಮಾಡಲಾಯಿತು.
ಹಿಜಾಬ್ ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮುಸ್ಲಿಂ ವ್ಯಾಪಾರಿಗಳು ಇತ್ತೀಚೆಗೆ ಅಂಗಡಿ ಬಂದ್ ನಡೆಸಿ ಪ್ರತಿಭಟನೆ ನಡೆಸಿದರು. ಇದನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆಯವರು, ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಅಂತ ಎಚ್ಚರಿಕೆ ನೀಡಿತ್ತು.
ಹೀಗಾಗಿ ದೇಗುಲದ ಆಡಳಿತ ಮಂಡಳಿ ಭಕ್ತರ ಹಿತದೃಷ್ಟಿಯಿಂದ ಇಂದು ಆರಂಭವಾದ ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಿಲ್ಲ, ಕಾಪು ಜಾತ್ರೆಯಲ್ಲಿ ಹೂ ಹಣ್ಣು ಕೋಳಿ ಹೀಗೆ ಕೋಟ್ಯಾಂತರ ರೂಪಾಯಿಗಳ ವ್ಯವಹಾರ ನಡೆಯುತ್ತೆ. ಮುಸ್ಲಿಂ ವ್ಯಾಪಾರಿಗಳಿಗೆ ಹೆಚ್ಚಾಗಿ ವ್ಯಾಪಾರದಲ್ಲಿ ತೊಡಗಿಸಿಕೊಳ್ಳುತ್ತಾರೆ.
ಆದರೆ ಈ ಬಾರಿ ಹಿಂದೂ ವ್ಯಾಪಾರಿಗಳೇ ಕಂಡು ಬಂದರು. ಕಾಪುವಿನಲ್ಲಿ ಆರಂಭವಾದ ಮುಸ್ಲಿಮರ ವ್ಯಾಪಾರ ಬಹಿಷ್ಕಾರ ಕಿಚ್ಚು ಕರಾವಳಿಯ ಎಲ್ಲ ಜಾತ್ರೆಗಳಿಗೂ ಹಬ್ಬುತ್ತಿದೆ...