
Mangalore; 23 ವರ್ಷದ ಯುವತಿ ಸೇರಿದಂತೆ ಮೂವರು ದಲ್ಲಾಳಿಗಳು ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ- ನಾಲ್ವರು ಯುವತಿಯರ ರಕ್ಷಣೆ
Wednesday, March 2, 2022
ಮಂಗಳೂರು ; ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ ನ ಆಪಾರ್ಟ್ ಮೆಂಟ್ ವೊಂದರ ಫ್ಲಾಟ್ ವೊಂದರಲ್ಲಿ ಗ್ರಾಹಕರಿಗೆ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು/ಮಹಿಳೆಯರನ್ನು ಒದಗಿಸುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 23 ವರ್ಷದ ಯುವತಿ ಸೇರಿದಂತೆ ಮೂವರು ಪಿಂಪ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 4 ಮಂದಿ ನೊಂದ ಯುವತಿಯರನ್ನು ರಕ್ಷಿಸಲಾಗಿದೆ.
ಮಂಗಳೂರು ನಗರದ ಪೂರ್ವ( ಕದ್ರಿ ) ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3 ನೇ ಕ್ರಾಸ್ ರಸ್ತೆಯಲ್ಲಿರುವ PEEBI ರೆಸಿಡೆನ್ಸಿ ಎಂಬ ಆಪಾರ್ಟ್ ಮೆಂಟ್ ನ 2 ನೇ ಮಹಡಿಯ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರ ನೇತ್ರತ್ವದ ತಂಡ ದಾಳಿ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಹುಡುಗಿಯರನ್ನು ತರಿಸಿಕೊಂಡು ಅನೈತಿಕ ಚಟುವಟಿಕೆ ದಂಧೆಯನ್ನು ನಡೆಸುತ್ತಿದ್ದ ದಲ್ಲಾಳಿಗಳಾದ(ಪಿಂಪ್) ಬಂಟ್ವಾಳದ ವಿಟ್ಲಪಡ್ನೂರಿನ ಕೆ.ಪಿ. ಹಮೀದ್(54) ಮಂಗಳೂರು ಆಕಾಶಭವನದ ಅನುಪಮ ಶೆಟ್ಟಿ(46), ಎಕ್ಕೂರಿನ ನಿಶ್ಮಿತ(23) ಬಂಧಿತರು.
ಇವರಿಂದ 5 ಮೊಬೈಲ್ ಫೋನುಗಳು ಹಾಗೂ 50,000/- ನಗದು, ಮಾರುತಿ 800 ಕಾರನ್ನು ವಶಪಡಿಸಿಕೊಳ್ಳಲಾಗಿದೆ. 4 ಮಂದಿ ನೊಂದ ಯುವತಿ/ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ.