-->
ಉಡುಪಿ; ಕಾರ್ಕಳದಲ್ಲಿ ಜಾಗದ ಜಗಳ ; ತಮ್ಮನಿಂದ‌ಲೇ ಅಣ್ಣನ ಕೊಲೆ

ಉಡುಪಿ; ಕಾರ್ಕಳದಲ್ಲಿ ಜಾಗದ ಜಗಳ ; ತಮ್ಮನಿಂದ‌ಲೇ ಅಣ್ಣನ ಕೊಲೆ

ಅಣ್ಣನನ್ನು ತಮ್ಮ ಚೂರಿಯಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ನಡೆದಿದೆ.


ಶೇಖರ್(50) ಹತ್ಯೆಯಾದ ವ್ಯಕ್ತಿ.  ಸಹೋದರ ರಾಜು(35) ಕೊಲೆ ಆರೋಪಿ. ಶೇಖರ್ ಹಾಗೂ ರಾಜು ಸಹೋದರರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

 ತಾಯಿಗೆ ಮಂಜೂರಾದ ಭೂಮಿಯಲ್ಲಿ ಅಣ್ಣ ಶೇಖರ ವಾಸವಾಗಿದ್ದ. ಅಣ್ಣನೊಂದಿಗೆ ವೈಮನಸ್ಸಿನಿಂದ ರಾಜು ಪ್ರತ್ಯೇಕ ಶೆಡ್ ನಿರ್ಮಾಣ ಮಾಡಿಕೊಂಡು ವಾಸವಾಗಿದ್ದ. ರವಿವಾರ ಶೇಖರ ಮನೆಯಲ್ಲಿ ಅಂಗಳದ ಕಾಮಗಾರಿ ನಿರ್ವಹಿಸುತ್ತಿದ್ದು, ಮೂವರು ಕೆಲಸಗಾರರೊಂದಿಗೆ ಜೆಲ್ಲಿಯನ್ನು ಹೊತ್ತುಮನೆಗೆ ಸಾಗಿಸುತ್ತಿದ್ದ. ಅಲ್ಲಿಗೆ ಪಾನಮತ್ತನಾಗಿ ಆಗಮಿಸಿದ ರಾಜು ಮನೆಯಲ್ಲಿ ದುರಸ್ತಿ ಕೆಲಸ ನಿರ್ವಹಿಸದಂತೆ ಆಕ್ಷೇಪಿಸಿದ್ದ ಎನ್ನಲಾಗಿದೆ. 

ನಂತರ ರಾಜು ಚೂರಿಯನ್ನು ತಂದು ಅಣ್ಣನ ಕುತ್ತಿಗೆ ಮತ್ತು ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆಂದು ಆರೋಪಿಸಲಾಗಿದೆ. ಅತೀವ ರಕ್ತಸ್ರಾವದಿಂದ ಶೇಖರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article