-->
ads hereindex.jpg
ಉಡುಪಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಂದ ಪೇಜಾವರ  ಶ್ರೀಗಳ ಭೇಟಿ - ಕಾರಣ ಇದು

ಉಡುಪಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಂದ ಪೇಜಾವರ ಶ್ರೀಗಳ ಭೇಟಿ - ಕಾರಣ ಇದು

ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ಮುಂದುವರೆಸದಂತೆ ಉಡುಪಿಯಲ್ಲಿ ಮುಸಲ್ಮಾನ ವರ್ತಕರು
ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿ  ಮನವಿ ಸಲ್ಲಿಸಿದರು. 

ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಭೇಟಿ ಮಾಡಿ, ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ ದೇವಸ್ಥಾನಗಳಲ್ಲಿ, ಜಾತ್ರೆ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಮುಸಲ್ಮಾನ ವ್ಯಾಪಾರಿಗಳ ಮನವಿ ಸಲ್ಲಿಸಿದರು. 

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪೇಜಾವರ ಶ್ರೀಗಳು, ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ವ್ಯಾಪಾರ ಬಗ್ಗೆ ಮನವಿ ಸಲ್ಲಿಸಿದ್ದಾರೆ
ಶಾಂತಿ-ಸಾಮರಸ್ಯ ಸೌಹಾರ್ದ ನೆಮ್ಮದಿ ಅವಶ್ಯವಾಗಿ ಬೇಕು
ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲಹಿಂದೂ ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದೆ ಹಲವು ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ಬಹಳ ನೋವಿನಲ್ಲಿದೆ
ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ
ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ
ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ
ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು ಹಿಂದೂ ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು ಅಂತ ಹೇಳಿದರು..


Ads on article

Advertise in articles 1

advertising articles 2