STATE

ಕುಂದಾಪುರದ ಕಾಲೇಜಿನಲ್ಲಿ RAGGING: ವಿದ್ಯಾರ್ಥಿಗೆ ಹಲ್ಲೆ!

ಉಡುಪಿ ಜಿಲ್ಲೆಯ ಕುಂದಾಪುರದ ಅಚ್ಲಾಡಿಯಲ್ಲಿರುವ  ಈ ಸಿ ಆರ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸ್ಟಡಿ  ಕಾಲೇಜಿನಲ್ಲಿ ರ‌್ಯಾಗಿಂಗ್ ನಡೆದಿದ್ದು, ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  

ಕೇರಳ ಮೂಲದ ವಿದ್ಯಾರ್ಥಿಗಳು ದುರ್ಗಾದಾಸ್ ಎಂಬ ವಿದ್ಯಾರ್ಥಿ ಮೇಲೆ ಸೀನಿಯರ್ ವಿದ್ಯಾರ್ಥಿಗಳುಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ದಿಲ್ಶಾದ್ ಮತ್ತು ಶಿಂಡೋ  ಎಂಬ ಇಬ್ಬರು ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳನ್ನು ತೀವ್ರವಾಗಿ ರಾಗಿಂಗ್ ಮಾಡುತ್ತಿದ್ದರು ಎನ್ನಲಾಗಿದೆ.

 ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಯುವಕ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಾಲೇಜು ಆವರಣದ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜಿಸಲಾಗಿದೆ.

ಟ್ಯಾಗ್‌ಗಳು: STATE