ಗೆಳೆಯನ ಜೊತೆಗಿದ್ದ ಆಸ್ಪತ್ರೆ ಮಹಿಳಾ ಸಿಬ್ಬಂದಿಯ ಸಾಮೂಹಿಕ ಅತ್ಯಾಚಾರ
Friday, March 25, 2022
ಚೆನ್ನೈ: ವೆಲ್ಲೂರಿನ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
ಗೆಳೆಯನ ಜೊತೆಗೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಿಕ್ಷಾದಲ್ಲಿ ಹತ್ತಿದವರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಅಲ್ಲದೇ ಯುವತಿಯ ಗೆಳೆಯನ ಬಳಿ ಇದ್ದ ಸುಮಾರು 40 ಸಾವಿರ ರೂ ಹಣವನ್ನು ಎಗರಿಸಿದ್ದಾರೆ.
ಹಣ ಪಾಲು ಮಾಡುವ ವಿಚಾರವಾಗಿ ಕುಡಿದ ಮತ್ತಿನಲ್ಲಿದ್ದ ಆರೋಪಿಗಳಿಬ್ಬರು ಜಗಳ ಮಾಡುವಾಗ ಪೊಲೀಸರ ಕೈಗೆ ಸಿಕ್ಲಿದ್ದು ಎಲ್ಲಾ ವಿಚಾರಗಳು ಬಹಿರಂಗವಾಗಿದೆ.