ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು
Monday, March 28, 2022
ಮೈಸೂರು: ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆಯೊಂದು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ.
ಮಾದಾಪುರ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಪರೀಕ್ಷೆ ಬರೆಯುವ ವೇಳೆಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಆಕೆಯನ್ನು ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಲಾಗಿತ್ತು. ಆದರೆ ಅನುಶ್ರೀ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಮಗಳು ಪರೀಕ್ಷೆ ಬರೆದು ಬರುತ್ತಾಳೆಂದು ನಿರೀಕ್ಷೆಯಲ್ಲಿದ್ದ ಹೆತ್ತವರಿಗೆ ಈಗ ಬರ ಸಿಡಿಲು ಎರಗಿದಂತಾಗಿದೆ.