UDUPI-ಮುಸ್ಲಿಂ ವ್ಯಾಪಾರಿಗಳಿಗೆ ಕೊಲ್ಲೂರು ಜಾತ್ರೆಗೂ ನಿರ್ಬಂಧ ..?
Thursday, March 24, 2022
ಕರಾವಳಿಯಲ್ಲಿ ದೇಗುಲದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರ್ಬಂಧ ಚರ್ಚೆ ಜೋರಾಗಿದ್ದು, ಈ ನಡುವೆ ನಾಳೆ ನಡೆಯುವ ಕೊಲ್ಲೂರು ಜಾತ್ರೆಗೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧದ ಬಿಸಿ ತಟ್ಟುವ ಸಾಧ್ಯತೆ ಇದೆ.
ದಕ್ಷಿಣ ಭಾರತದ ಪುಣ್ಯ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವ ನಾಳೆ ನಡೆಯಲಿದ್ದು, ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ. ಆದ್ರೆ ಈ ಬಾರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಬೇಕು ಅಂತ ಹಿಂದೂ ಸಂಘಟನೆಯವರು ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಅಲ್ಲದೇ ಹಿಂದೂ ಸಂಘಟನೆಗಳ ಈ ಅಭಿಯಾನಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಸಂಧ್ಯಾ ರಮೇಶ್ ಕೂಡ ಸಾಥ್ ನೀಡಿದ್ದಾರೆ. ಆದರೆ ದೇಗುಲದ ಆಡಳಿತ ಈ ಬಗ್ಗೆ ಇನ್ನಷ್ಷೇ ಸ್ಪಷ್ಟ ನಿರ್ಣಯ ಕೈಗೊಳ್ಳಬೇಕಿದೆ..