
Udupi- ಮೆಡಿಕಲ್ ಶಾಪಿನ ಮಾಲಕ ವಾಮನ್ ನಾಯಕ ರಸ್ತೆ ಅಪಘಾತದಲ್ಲಿ ಸಾವು!
ಉಡುಪಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪರ್ಕಳದ ಮೆಡಿಕಲ್ ಶಾಪ್ ಮಾಲಕ ವಾಮನ ನಾಯಕ್ ಸಾವನ್ನಪ್ಪಿದ್ದಾರೆ.
ವಾಮನ ನಾಯಕ್ ಅವರು ಬೆಳಿಗ್ಗೆ ಮಗನನ್ನು ಉಡುಪಿಯಲ್ಲಿ ಬಿಟ್ಟು ಬೈಕ್ ನಲ್ಲಿ ಪರ್ಕಳದ ತಮ್ಮ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ, ವೇಗವಾಗಿ ವಿದ್ಯಾರ್ಥಿನಿಯೊಬ್ಬಳು ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದೆ.
ತತ್ ಕ್ಷಣ ಅವರನ್ನು ಉಡುಪಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಓರ್ವ ಮಗ, ಮಗಳನ್ನು ಅಗಲಿದ್ದಾರೆ. ಮೃತರ ಉತ್ತಮ ಭಜನೆ ಭಕ್ತಿಗೀತೆ, ಹಾಗೂ ಸಂಗೀತದ ಪರಿಕರಗಳನ್ನು ನುಡಿಸುತ್ತಿದ್ದರು, ಹಾಡುಗಾರಿಯಿಂದ ಉಡುಪಿಯ ಸುತ್ತಮುತ್ತ ಧಾರ್ಮಿಕ ಕಾರ್ಯಕ್ರಮಗಳಿಗೆ ಹಾಡುಗಾರಿಕೆಯ ಮೂಲಕ ಜನಮನ್ನಣೆ ಗಳಿಸಿದ್ದರು.