
ಉಡುಪಿಯಲ್ಲಿ ಬಾವಿಗೆ ಬಿದ್ದ ಚಿರತೆ ( video)
ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಕೆರಾಡಿಯ ಚಪ್ಪರಮಕ್ಕಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಚಪ್ಪರಮಕ್ಕಿಯ ಮನೆ ಬಾವಿಯಲ್ಲಿ ಚಿರತೆ ನೋಡಿದ ಮನೆಯವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಬಳಸಿ ಚಿರತೆಯನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಅಪರೂಪದ ಚಿರತೆಯನ್ನು ನೋಡುದಕ್ಕೆ ನೂರಾರು ಮಂದಿ ಊರವರು ಸೇರಿದ್ದರು..