
4 ವರ್ಷದ ಬಾಲೆಯ ಅತ್ಯಾಚಾರ ಮಾಡಿದ 9 ವಯಸ್ಸಿನ ಬಾಲಕ
ಮುಂಬೈ : ತನ್ನ ನೆರೆಮನೆಯ ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ನಡೆದಿದೆ.
ಆಟವಾಡುವ ನೆಪದಲ್ಲಿ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಬಾಲಕ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಬಾಲಕಿ ತನ್ನ ಖಾಸಗಿ ಅಂಗದಲ್ಲಿ ನೋವಾಗುತ್ತಿರುವ ಬಗ್ಗೆ ತಾಯಿ ಬಳಿ ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಾಲಕನ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.