ಮಂಗಳೂರು ಪಾವಂಜೆ Accident- ಅಪಘಾತದ ಭೀಕರ ದೃಶ್ಯ CCTV ಯಲ್ಲಿ ಸೆರೆ
Friday, April 22, 2022
ಮಂಗಳೂರು; ಮಂಗಳೂರಿನ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಮ್ನಿ ಕಾರು ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಎ.21 ರಂದು ರಾತ್ರಿ 8.45ರ ಸುಮಾರಿಗೆ ಮುಲ್ಕಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬಸ್ ಮತ್ತು ಒಮಿನಿ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು . ಮೃತರನ್ನ ಚಾಲಕ ಭುಜಂಗ (58)
ಹಾಗು ವಸಂತ ಕುಂದರ್ ಎಂದು ಗುರುತಿಸಲಾಗಿದೆ. ಗಾಯಾಳು ಬಾಲಕೃಷ್ಣ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರೂ ಮುಕ್ಕಾ ಸಮೀಪದ ಪಡ್ರೆ ನಿವಾಸಿಗಳಾಗಿರುತ್ತಾರೆ. ಒಮಿನಿ ಕಾರ್ ಚಾಲಕನ ನಿರ್ಲಕ್ಷ್ಯತನದಿಂದ ಈ ಘಟನೆ ಸಂಭವಿಸಿದ್ದು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .